ರಾಯಚೂರು : ಬೆಂಗಳೂರಿಗೆ ಹೊರಟಿದ್ದ ಗ್ರೀನ್ ಲೈನ್ ಖಾಸಗಿ ಬಸ್ ಆಂಧ್ರದ ಕರ್ನೂಲ್ ಜಿಲ್ಲೆಯ ಆಲೂರು ಬಳಿ ಭೀಕರ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಯಾಗಿದೆ.
ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೆಂಕಿ ಕೂಡ ಹೊತ್ತಿಕೊಂಡಿದೆ. ಈ ವೇಳೆ ಬೆಂಕಿ ಹಾರಿಸಿದ ಬಸ್‌ನ ಪ್ರಯಾಣಿಕರು ಗಾಯಗೊಂಡ ಕಾರು ಚಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಬಳಿಕ ಸುಮಾರು 2 ಗಂಟೆ ಚಳಿಯಲ್ಲಿ ಒದ್ದಾಡಿದ್ದಾರೆ. ಅಪಘಾತಕ್ಕೆ ಕಾರು ಚಾಲಕನ ಅತಿವೇಗದ ಚಾಲನೆಯೇ ಕಾರಣ ಎಂದು ಹೇಳಲಾಗಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.















