ಮನೆ ಅಪರಾಧ ಖಾಸಗಿ ಬಸ್ ​ಗಳ ನಡುವೆ ಮುಖಾಮುಖಿ ಡಿಕ್ಕಿ: 4 ಮಂದಿ ಸಾವು, 70 ಪ್ರಯಾಣಿಕರಿಗೆ ಗಾಯ

ಖಾಸಗಿ ಬಸ್ ​ಗಳ ನಡುವೆ ಮುಖಾಮುಖಿ ಡಿಕ್ಕಿ: 4 ಮಂದಿ ಸಾವು, 70 ಪ್ರಯಾಣಿಕರಿಗೆ ಗಾಯ

0

ತಮಿಳುನಾಡು: ಎರಡು ಬಸ್ ​ಗಳು ಮುಖಾಮುಖಿ ಡಿಕ್ಕಿಯಾಗಿದ್ದು ಈ ಅಪಘಾತದಲ್ಲಿ ನಾಲ್ವರು ಮೃತಪಟ್ಟು 70ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಸಂಭವಿಸಿದೆ.

Join Our Whatsapp Group

ಕಡಲೂರು ಮತ್ತು ಪನ್ರುತಿ ನಡುವೆ ಎರಡು ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಒಂದು ಬಸ್‌ ನ ಮುಂಭಾಗದ ಟೈರ್ ಒಡೆದ ಪರಿಣಾಮ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ.

ಆಂಬ್ಯುಲೆನ್ಸ್ ಬರುವ ಮುನ್ನವೇ ಪ್ರಯಾಣಿಕರು ಗಾಯಾಳುಗಳನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಹಿಂದಿನ ಲೇಖನಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ
ಮುಂದಿನ ಲೇಖನದಾಖಲೆಗಳ ನೋಂದಣಿಗೆ ಕಾವೇರಿ-2 ಜಾರಿ: ಕೃಷ್ಣ ಭೈರೇಗೌಡ