ಮಂಡ್ಯ : ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಒಳ್ಳೆಯ ಅರೋಗ್ಯ, ಆಯಸ್ಸು ಮತ್ತು ಮನಃಶಾಂತಿ ವೃದ್ಧಿಯಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಆನಂದ್ ಅವರು ಹೇಳಿದರು.
ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ(ರಿ) ಇವರ ಸಂಯುಕ್ತಾಶ್ರಯದಲ್ಲಿ ಇಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಮ್ಮ ಭಾರತ ದೇಶವು ವಿಶ್ವದಲ್ಲಿಯೇ ಯೋಗ ಗುರು ಎಂದೆನಿಸಿಕೊAಡಿದೆ, ಅದನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಹೊಣೆಯಾಗಿದೆ, ಪ್ರತಿದಿನ ಯೋಗ ಮಾಡುವ ಅಭ್ಯಾಸವನ್ನು ಮೈಗೂಡಿಸಿಕೊಳ್ಳಿ ಎಂದು ಹೇಳಿದರು. ಯೋಗಾಭ್ಯಾಸ ಕೇವಲ ಯೋಗ ದಿನಾಚರಣೆಗೆ ಸೀಮಿತವಾಗಬಾರದು. ಪ್ರತಿ ದಿನವೂ ಯೋಗ ದಿನವೇ ಆಗಾಗಿ ದಿನಕ್ಕೆ ಒಂದು ತಾಸು ಯೋಗ, ವ್ಯಾಯಾಮ ಮಾಡುವುದರಿಂದ ಬದುಕಿನಲ್ಲಿ ಚೈತನ್ಯ, ನೆಮ್ಮದಿ ಕಾಣಬಹುದು ಎಂದು ಹೇಳಿದರು.
ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ: ಸೀತಾ ಲಕ್ಷ್ಮಿ ಅವರು ಮಾತನಾಡಿ ಯೋಗ ಮಾಡುವುದರಿಂದ ಆರೋಗ್ಯದ ಜತೆಗೆ ಸೌಂದರ್ಯವನ್ನು ಸಹ ಕಾಪಾಡಿಕೊಳ್ಳಬಹುದು. ಯೋಗ, ವ್ಯಾಯಾಮದಿಂದ ಸಕ್ಕರೆ ಕಾಯಿಲೆ, ರಕ್ತದ ಒತ್ತಡ, ಥೈರಾಯಿಡ್ ಹಾಗೂ ಮಾನಸಿಕ ಒತ್ತಡ ಕಾಯಿಲೆಗಳಿಗೆ ಕಡಿವಾಣ ಹಾಕಬಹುದು ಎಂದರು.
ಅನಾರೋಗ್ಯವೆಂದು ಆಸ್ಪತ್ರೆಗಳಿಗೆ ಭೇಟಿ ನೀಡದಿರಲು ಯೋಗ, ವ್ಯಾಯಾಮ ಮಾಡುವುದನ್ನು ಇಂದಿನಿAದಲೇ ಪ್ರಾರಂಭಿಸಿ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಯೋಗ ತರಬೇತುದಾರರಾದ ಡಾ. ರಕ್ಷಿತಾರವರು 45 ನಿಮಿಷಗಳ ಕಾಲ ಸುಮಾರು 25 ಆಸನಗಳನ್ನು ಒಳಗೊಂಡAತೆ ತರಬೇತಿ ನೀಡಿದರು.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಸುಬ್ರಮಣ್ಯರವರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ, ನ್ಯಾಯಾಂಗ ಇಲಾಖೆಯ ಸದಸ್ಯರು ಮತ್ತು ನ್ಯಾಯಾಲಯದ ಸಿಬಂದಿವರ್ಗದವರು ಯೋಗಭ್ಯಾಸದಲ್ಲಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರುಗಳಾದ ಮಂಜುಳಾ, ಯಾದವ್ ಮತ್ತು ಶಿವಪ್ರಸಾದ್ ಹಾಜರಿದ್ದರು.














