ಮನೆ ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಗೆ ಕೋವಿಡ್‌ ಪಾಸಿಟಿವ್‌

ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru): ಆರೋಗ್ಯ ಸಚಿವ ಡಾ. ಕೆ. ಸುಧಾಕರ್ (k.sudhakar) ಅವರಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಅವರು ಹೋಮ್‌ ಐಸೋಲೇಷನ್‌ ನಲ್ಲಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸುಧಾಕರ್‌ ಅವರು, ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ.

ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್‌ ಆಗಿರುವುದು ಪತ್ತೆಯಾಗಿದೆ.

ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು, ಸದ್ಯ ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ.

10 ವಿದೇಶ ಪ್ರವಾಸ:

ಸುಧಾಕರ್‌ ಅವರು ಕುಟುಂಬದ ಜೊತೆ 10 ದಿನಗಳ ವಿದೇಶ ಪ್ರವಾಸ ಮುಗಿಸಿ ವಾಪಸ್‌ ಆಗಿದ್ದರು. 10ಕ್ಕೂ ಹೆಚ್ಚು ದಿನಗಳ ಕಾಲ ವಿದೇಶಿ ಪ್ರವಾಸದಲ್ಲಿದ್ದ ಸಚಿವರಿಗೆ ವಿದೇಶದಿಂದಲೇ ಸೋಂಕು ತಗುಲಿರುವ ಅನುಮಾನ ಮೂಡಿದೆ.