ದಾವಣಗೆರೆ: ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ಸಂಬಂಧ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಜೂನ್ 3ಕ್ಕೆ ಮುಂದೂಡಿದೆ. ಈ ಬೆನ್ನಲ್ಲೇ ಸ್ವಾಮೀಜಿ ಪರ ವಕೀಲ ಎಸ್.ವಿ.ಪಾಟೀಲ್ ಅವರು ತಕರಾರು ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.
ಈ ಕುರಿತು “ವಚನಾನಂದ ಸ್ವಾಮೀಜಿ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇಂದು ನಡೆಯಬೇಕಿತ್ತು. ಆದರೆ ನ್ಯಾಯಾಲಯ ಜೂನ್ 3ಕ್ಕೆ ವಿಚಾರಣೆ ಮುಂದೂಡಿದೆ. ನಾವು ಸ್ವಾಮೀಜಿ ಪರವಾಗಿ ತರಕಾರು ಅರ್ಜಿ ಸಲ್ಲಿಸಿದ್ದೇವೆ. ಇನ್ನು ಸ್ವಾಮೀಜಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಬರುವುದಿಲ್ಲ” ಎಂದು ವಕೀಲ ಎಸ್.ವಿ.ಪಾಟೀಲ್ ತಿಳಿಸಿದರು ಎನ್ನಲಾಗಿದೆ.


















