ಚಿತ್ರದುರ್ಗ(Chitradurga): ಲೈಂಗಿಕ ಕಿರುಕುಳ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಹೃದಯ ಸಂಬಂಧಿ ಕಾಯಿಲೆ ತಪಾಸಣೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ.
ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಮಹಾದೇವಿ ಎಂ.ಮರಕಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಸೋಮವಾರ ಪ್ರಕಟಿಸಿದರು.
ಆರೋಪಿ ಯನ್ನು ಮಂಗಳವಾರ ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ.
Saval TV on YouTube