ಚಿಕ್ಕೋಡಿ(ಬೆಳಗಾವಿ): ತಡರಾತ್ರಿ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಐದು ಮನೆಗಳು ಹಾಗೂ ಒಂದು ಅಂಗಡಿ ಸಂಪೂರ್ಣ ಸುಟ್ಟಿರುವ ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಚಿಕ್ಕೋಡಿ ಅಗ್ನಿಶಾಮಕ ಸಿಬ್ಬಂದಿಗಳು ಬಂದು ನಾಲ್ಕು ಫೈರ್ ಎಂಜಿನ್ ಗಳ ಮೂಲಕ ಯಶಸ್ವಿಯಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿದಾನಂದ ಮೇದಾರ ಮತ್ತು ಮಹಾದೇವ ಮೇದಾರ ಕುಟುಂಬಕ್ಕೆ ಸೇರಿದ 5 ಮನೆಗಳು ಮತ್ತು ದತ್ತಾತ್ರೇಯ ಪರಿಟ್ ಅವರಿಗೆ ಸೇರಿದ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಸ್ಥಳಕ್ಕೆ ಚಿಕ್ಕೋಡಿ ಡಿವೈಎಸ್ಪಿ ಗೋಪಾಲ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.