Saval TV on YouTube
ಮೈಸೂರು(Mysuru): ಮ್ಯಾಂಡಸ್ ಚಂಡಮಾರುತ ಪರಿಣಾಮ ಕಳೆದೆರಡು ದಿನಗಳಿಂದ ಸುರಿದ ಬಿರುಸಿನ ಮಳೆಯಿಂದಾಗಿ ಎಚ್.ಡಿ. ಕೋಟೆ ತಾಲ್ಲೂಕಿನ ಹೆಬ್ಬಳ್ಳ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ.
ಜಲಾಶಯದ ಹೊರಹರಿವು ಹೆಚ್ಚಿದ್ದರಿಂದ ಬುಧವಾರ ಎಚ್.ಡಿ.ಕೋಟೆ– ಬೆಳಗನಹಳ್ಳಿ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ಬೀರೇಶ್ವರ ದೇವಾಲಯದ ಸೇತುವೆಯೂ ಮುಳುಗಡೆಯಾಗಿದೆ.
ಸೇತುವೆಗಳ ಮೇಲೆ 3 ಅಡಿ ನೀರು ಹರಿಯುತ್ತಿದ್ದರೂ ಅಪಾಯ ಲೆಕ್ಕಿಸದೇ ವಾಹನ ಸವಾರರು ಸಂಚರಿಸುತ್ತಿದ್ದಾರೆ.
ಪ್ರಸಕ್ತ ವರ್ಷ 7ನೇ ಬಾರಿ ಸೇತುವೆ ಮುಳುಗಡೆಯಾಗಿದ್ದು, ಎತ್ತರದ ಹೊಸ ಸೇತುವೆ ನಿರ್ಮಾಣಕ್ಕೆ ಬೆಳಗನಹಳ್ಳಿ, ಹೊಸತೊರವಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಎರಡು ದಿನದ ವರ್ಷಧಾರೆಗೆ ಹಲವು ರೈತರ ಜಮೀನಿಗೂ ನೀರು ನುಗ್ಗಿದ್ದು, ಬೆಳೆ ಹಾನಿ ಸಂಭವಿಸಿದೆ.