ಮನೆ ಹವಮಾನ ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆ

0

ಬೆಂಗಳೂರು: ಕಳೆದ ಮೂನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೋಮವಾರ ಸಾಕಷ್ಟು ಕಡೆ ಧಾರಾಕಾರ ಮಳೆಯಾದ ಬೆನ್ನಲ್ಲೇ ಇನ್ನೂ ಮೂರು ದಿನಗಳ ಕಾಲ ನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ.

ಬೆಂಗಳೂರಿನ ಹಲವೆಡೆ ಮಳೆ ಸುರಿದಿದೆ, ರಾಜಾಜಿನಗರ, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ವಿದ್ಯಾರಣ್ಯಪುರ, ಯಶವಂತಪುರ, ಕುರುಬರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಮೆಜೆಸ್ಟಿಕ್, ಯಶವಂತಪುರ, ಕೆ ಆರ್ ಮಾರ್ಕೆಟ್ , ಕಾರ್ಪೊರೇಷನ್ ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಪರಿಣಾಮ ಧಿಢೀರ್ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿತ್ತು. ಮಳೆ ಬಿಟ್ಟು ಬಿಟ್ಟು ಬಂದಿದ್ದರಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿತ್ತು.

ಕಲಬುರಗಿಯಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.