ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ ೨೫ ದಿನಾಂಕ ೨೯ರವರೆಗೆ ವ್ಯಾಪಕ ಮಳೆಯಾಗಲಿದೆ. ಪೂರ್ವ ಅರೇಬಿ ಸಮುದ್ರದ ಮಹಾರಾಷ್ಟ್ರ, ಕರ್ನಾಟಕ, ಕೇರಳದ ಕರಾವಳಿ ಭಾಗದಲ್ಲಿ ಟ್ರಫ್ ಇರುವ ಕಾರಣ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ. ಎಂದು ಹವಮಾನ ಇಲಾಖೆ ತಿಳಿಸಿದೆ.
ವ್ಯಾಪಕ ಮಳೆ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ , ಚಿಕ್ಕಮಗಳೂರು, ಹಾಸನ ಕೊಡಗು ಜಿಲ್ಲೆಗಳಲ್ಲಿ ಹಲವು ಕಡೆ ಭಾರೀ ಮಳೆ ಸಾಧ್ಯತೆಯಿದೆ. ಮುನ್ಸೂಚನೆಯಾಗಿ ಈ ಭಾಗದಲ್ಲಿ ಹವಾಮಾನ ಇಲಾಖೆ ಅರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲೂ ಭಾರೀ ಮಳೆಯ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮುಂಗಾರು ಮಳೆ ಚುರುಕಾಗುತ್ತಿದೆ. ಜೂನ್ ಆರಂಭದಲ್ಲೇ ವಾಡಿಕೆಗಿಂತ ಹೆಚ್ಚಿನ ಮುಂಗಾರು ಮಳೆಯಾಗಿದೆ. ಕಳೆದ ಬಾರಿಗಿಂತ ರಾಜ್ಯದಲ್ಲಿ ೬೨% ನಷ್ಟು ಹೆಚ್ಚಿದ ವಾಡಿಕೆಯ ಮುಂಗಾರು ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.