ಬೆಂಗಳೂರು: ಜೂನ್ ಎರಡನೇ ವಾರದಲ್ಲಿ ಮುಂಗಾರು ಮಾರುತಗಳು ಪ್ರವೇಶಿಸಿದ್ದು, 2 ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗಿದ್ದು, ರಾಜ್ಯದಲ್ಲಿ ಮಳೆ ಕ್ರಮೇಣ ತೀವ್ರಗೊಳ್ಳಿಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಹಲವು ಜಿಲ್ಲೆಗಳಲ್ಲಿ ಈ ತಿಂಗಳವಿಡಿ ಉತ್ತಮ ಮಳೆ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜುಲೈ 6 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹವಾಮಾನ ಮುನ್ಸೂಚನೆಯಂತೆ ಭಾನುವಾರ ಸಂಜೆ ಕರಾವಳಿಯಲ್ಲಿ ಮಳೆ ಆರ್ಭಟ ಜೋರಾಗಿತ್ತು. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವುದು ಆಶಾದಾಯಕವಾಗಿದೆ.
ವೈಜ್ಞಾನಿಕ ಹವಾಮಾನ ಮುನ್ಸೂಚನೆಯ ಜೊತೆಗೆ ಜುಲೈ 6 ರಿಂದ ಪುನರ್ವಸು ಮಳೆ ಕೂಡ ಆರಂಭವಾಗಲಿದೆ.