ಬೆಂಗಳೂರು (Bengaluru): ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 19 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ. ತಲುವುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಯೆಲ್ಲೊ ಹಾಗೂ ನಂತರ ನಾಲ್ಕು ದಿನಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡದಂತೆ ಯಾತ್ರಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.