ಮನೆ ರಾಜ್ಯ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

0

ಬೆಂಗಳೂರು:  ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Join Our Whatsapp Group

ಕರಾವಳಿಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.

ಮಂಡ್ಯ ಕೆವಿಕೆ, ಮಾಲೂರು, ಸರಗೂರಿನಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ, ಮುದಗಲ್, ಕೃಷ್ಣರಾಜಸಾಗರ, ಕನಕಪುರ, ಹರದನಹಳ್ಳಿ, ಗಬ್ಬೂರು, ಜಾಲಹಳ್ಳಿ, ರಾಯಚೂರು, ಸಾಲಿಗ್ರಾಮ, ಶ್ರೀರಂಗಪಟ್ಟಣ, ಬೆಂಗಳೂರು ಕೆಎಎಲ್​, ಬಂಡೀಪುರ, ಕೊಳ್ಳೇಗಾಲ, ಚಾಮರಾಜನಗರ, ಮೈಸೂರು, ಹಲಬರ್ಗಾ, ಹುಲ್ಸೂರು, ಸಾಯಿಗಾಂವ್, ಭಾಲ್ಕಿ, ದೇವದುರ್ಗ, ಕೋಲಾರ, ಗೌರಿಬಿದನೂರು, ತೊಂಡೇಭಾವಿ, ಜ್ಞಾನಭಾರತಿ ವಿವಿ ಕ್ಯಾಂಪಸ್, ಗೋಪಾಲ್​ನಗರ, ಉತ್ತರಹಳ್ಳಿ, ಬೆಂಗಳೂರು ನಗರ, ಮಂಠಾಳ, ನಿಟ್ಟೂರು, ಔರಾದ್, ಕುರ್ಡಿ, ಮಸ್ಕಿ, ಮಾನ್ವಿ, ಕಕ್ಕೇರಿ, ರಾಮನಗರ, ಖಜೂರಿ, ಮುಡಬಿ, ಹೊಸಕೋಟೆ, ಮಂಡ್ಯ, ಬರಗೂರು, ಚಿಕ್ಕಬಳ್ಳಾಪುರ, ಮೂಡಿಗೆರೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿಯಿಂದಲೂ ಮಳೆ ಸುರಿಯುತ್ತಿದೆ, ಮೋಡಕವಿದ ವಾತಾವರಣವಿರಲಿದ್ದು, ಇಡೀ ದಿನವೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್’​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ದೊರೆತಿದೆ. ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ.