ಮನೆ ರಾಜ್ಯ ರಾಜ್ಯದ ವಿವಿಧೆಡೆ ಎರಡು ದಿನ ಭಾರಿ ಮಳೆ ಸಾಧ್ಯತೆ

ರಾಜ್ಯದ ವಿವಿಧೆಡೆ ಎರಡು ದಿನ ಭಾರಿ ಮಳೆ ಸಾಧ್ಯತೆ

0

ಬೆಂಗಳೂರು (Bengaluru): ರಾಜ್ಯದ ವಿವಿಧೆಡೆ ಇಂದು (ಜು.17) ಮತ್ತು ನಾಳೆ (ಜು.18) ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈಋತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಮುಂದಿನ 48 ಗಂಟೆಗಳು ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಬೀದರ್, ಕಲಬುರ್ಗಿ, ಬೆಳಗಾವಿ, ಹಾಗೂ ಹಾಸನ ಜಿಲ್ಲೆಗೆ ಭಾನುವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸೋಮವಾರವೂ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮಂಗಳವಾರದಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40 ಕಿ.ಮೀ. ನಿಂದ 50 ಕಿ.ಮೀ. ಇದೆ. ಈ ವೇಗವು 48 ಗಂಟೆಗಳ ಅವಧಿಯಲ್ಲಿ 60 ಕಿ.ಮೀ. ತಲುಪುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಇಲಾಖೆ ಸೂಚಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದಿನ 48 ಗಂಟೆಗಳು ಮುಂದುವರೆಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಹಿಂದಿನ ಲೇಖನಉಪರಾಷ್ಟ್ರಪತಿ ಚುನಾವಣೆ: ಜಗದೀಪ್ ಧಂಖರ್ ಎನ್‌ ಡಿಎ ಅಭ್ಯರ್ಥಿ
ಮುಂದಿನ ಲೇಖನಬಾಲಕಿ ಮೇಲೆ ಅತ್ಯಾಚಾರ, ಆ್ಯಸಿಡ್‌ ಕುಡಿಸಿ ಹತ್ಯೆಗೆ ಯತ್ನ