ಮನೆ ರಾಜ್ಯ ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ

0

ಬೆಂಗಳೂರು (Bengaluru): ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ 4 ದಿನ ಯೆಲ್ಲೂ ಆಲರ್ಟ್ ಘೋಷಿಸಲಾಗಿದೆ. ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲೂ ಮಳೆಯಾಗುವ ಸಂಭವವಿದೆ.

ದಕ್ಷಿಣ ಒಳನಾಡಿನ ರಾಮನಗರ, ಹಾಸನ, ಚಿಕ್ಕಮಗಳೂರು, ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿದಂತೆ ಕರಾವಳಿ ಭಾಗದಲ್ಲಿ 4 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಾಳೆ ಕೂಡಾ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು  ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹಿಂದಿನ ಲೇಖನಕೊಪ್ಪಳ ಅಂಗನವಾಡಿಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ
ಮುಂದಿನ ಲೇಖನಕಾರು ಹೊಂದಿದವರ ಬಿಪಿಎಲ್‌ ಕಾರ್ಡ್‌ ರದ್ದು ಮಾಡುವುದಿಲ್ಲ: ಅರಗ ಜ್ಞಾನೇಂದ್ರ