ಮನೆ ಹವಮಾನ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

0

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Our Whatsapp Group

ಸಿಲಿಕಾನ್ ಸಿಟಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಮಂಗಳವಾರ ಮತ್ತು ಬುಧವಾರ ಯೆಲ್ಲೋ ಅಲರ್ಟ್, ಆ.15ರಂದು ಆರೆಂಜ್ ಅಲರ್ಟ್ ಇರಲಿದೆ. ಹಾಗೆಯೇ ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಅರಬ್ಬಿ ಸಮುದ್ರದಲ್ಲಿ ತೇವಾಂಶ ಭರಿತ ಮೋಡ: ದಕ್ಷಿಣ, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ತೇವಾಂಶ ಭರಿತ ಮೋಡ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ. ಕರಾವಳಿ, ಉತ್ತರ ಕರ್ನಾಟಕ, ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಕಡಿಮೆ ವರ್ಷಧಾರೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಇಂದು ಬೆಳಗಿನಜಾವ ಮಳೆಯಾಗಿದೆ. ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ಇದ್ದರೆ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶವಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶವಿದ್ದು, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶವಿದೆ. ಹೆಚ್​ಎಎಲ್​​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶವಿದ್ದರೆ, ಕನಿಷ್ಠ 19.0 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲಾಗಿದೆ.