ಮನೆ ರಾಷ್ಟ್ರೀಯ ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

0

ತಿರುವನಂತಪುರಂ : ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಸೋಮವಾರ (ನ.24) ರಾಜ್ಯದಲ್ಲಿ ವ್ಯಾಪಕ ಮಳೆಯಾಗಿದೆ. ವರುಣಾರ್ಭಟ ಜೋರಾಗುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ ಕೇರಳದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು, 6ರಿಂದ 11 ಸೆಂ.ಮೀ ಮಳೆಯಾಗಲಿದೆ ಎಂದು ತಿಳಿಸಿದೆ.

ಐಎಂಡಿ ಮಾಹಿತಿಗಳ ಪ್ರಕಾರ, ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲವೆಡೆ 7 ರಿಂದ 11 ಸೆಂ.ಮೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗುಡುಗು, ಮಿಂಚು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.