ಮಡಿಕೇರಿ(Madikeri): ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿನ ಪಯಸ್ವಿನಿ ನದಿ ಮೈದುಂಬಿ ಹರಿಯುತ್ತಿದೆ.
ನದಿಯ ಕಲ್ಮಕಾರು, ಕಲ್ಲುಗುಂಡಿ ಪ್ರದೇಶಗಳು ದ್ವೀಪಗಳಂತಾಗಿದೆ. ಕಿಂಡಿ ಅಣೆಕಟ್ಟೆಗೆ ಮರದ ದಿಮ್ಮಿಗಳು ಸಿಲುಕಿ ಹಲವು ಮನೆಗಳಿಗೆ ನೀರು ನುಗ್ಗಿದೆ.
ಜಿಲ್ಲಾಧಿಕಾರಿ ಡಾ.ಬಿ.ಸಿಸತೀಶ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಅಪಾಯಕಾರಿ ಸ್ಥಳದಲ್ಲಿ ವಾಸ ಮಾಡುತ್ತಿರುವವರನ್ನು ಕಾಳಜಿ ಕೇಂದ್ರಕ್ಕೆ ಕಳುಹಿಸಲಾಗಿದೆ.
ಸಂಪಾಜೆ ಹಾಗೂ ಭಾಗಮಂಡಲದಲ್ಲಿ ಸೋಮವಾರ ರಾತ್ರಿ 10 ಸೆಂ.ಮೀ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.