ಮನೆ ಹವಮಾನ ರಾಜ್ಯಾದ್ಯಂತ ಇಂದು, ನಾಳೆ ಭಾರೀ ಮಳೆ : ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಇಂದು, ನಾಳೆ ಭಾರೀ ಮಳೆ : ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

0

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದುದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡುಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.

ಇನ್ನೂ ನಾಳೆ ಕರಾವಳಿ ಜಿಲ್ಲೆಗಳಿಗೆ ಮಾತ್ರ ಆರೆಂಜ್ ಅಲರ್ಟ್ ಮುಂದುವರೆಸಲಾಗಿದೆ. ಮಲೆನಾಡು ಜಿಲ್ಲೆಗಳು ಸೇರಿ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾನುವಾರ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.