ಮನೆ ಹವಮಾನ ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಆರೆಂಜ್ ಅಲರ್ಟ್​ ಘೋಷಣೆ

0

ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Join Our Whatsapp Group

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ, ಎಚ್​ಎಎಲ್​ನಲ್ಲಿ 26.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕ್ಯಾಸಲ್​ ರಾಕ್​, ಸಿದ್ದಾಪುರ, ಕಮ್ಮರಡಿ, ಕೊಟ್ಟಿಗೆಹಾರ, ಆಗುಂಬೆ, ಸೋಮವಾರಪೇಟೆ, ಭಾಗಮಂಡಲ, ಕಳಸ, ಕೊಲ್ಲೂರು, ಯಲ್ಲಾಪುರ, ಗೇರುಸೊಪ್ಪ, ಧರ್ಮಸ್ಥಳ, ಲೋಂಡಾ, ಮಂಗಳೂರು ವಿಮಾನ ನಿಲ್ದಾಣ, ಲಿಂಗನಮಕ್ಕಿ, ಎನ್​ಆರ್​ಪುರ, ನಾಪೊಕ್ಲು, ಹುಂಚದಕಟ್ಟೆ, ಶೃಂಗೇರಿಯಲ್ಲಿ ಮಳೆಯಾಗಿದೆ.

ಕಾರ್ಕಳ, ಜಯಪುರ, ತರೀಕೆರೆ, ಕದ್ರಾ, ಪುತ್ತೂರು, ಕೋಟ, ಶಿರಾಲಿ, ಬೆಳ್ತಂಗಡಿ, ಅಜ್ಜಂಪುರ, ಅರಕಲಗೂಡು, ಪಣಂಬೂರು, ಮೂರ್ನಾಡು, ತ್ಯಾಗರ್ತಿ, ಹಾಸನ, ಹೊನ್ನಾವರ, ಅಂಕೋಲಾ, ಬನವಾಸಿ, ಔರಾದ್, ಸರಗೂರು, ಭದ್ರಾವತಿ, ಚನ್ನರಾಯಪಟ್ಟಣ, ಮುಂಡಗೋಡು, ಹಳಿಯಾಳ, ಕಾರವಾರ, ಮುಲ್ಕಿ, ಸಂಕೇಶ್ವರ, ಹಿಡಕಲ್, ಶ್ರವಣಬೆಳಗೊಳ, ಕುಮಟಾ, ಸುಳ್ಯ, ಧಾರವಾಡ, ಕಮಲಾಪುರ, ಕಲಘಟಗಿ, ಕಲಬುರಗಿ, ಮುದ್ದೇಬಿಹಾಳ, ಚಿಂಚೋಳಿ, ಕೃಷ್ಣರಾಜಪೇಟೆ, ಚನ್ನಗಿರಿ, ನಾಗಮಂಡಲ, ರಾಮನಗರದಲ್ಲಿ ಮಳೆಯಾಗಿದೆ.