ಬೆಂಗಳೂರು: ಕರ್ನಾಟಕದ ಆರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚು ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಕ್ಯಾಸಲ್ರಾಕ್, ಕೊಟ್ಟಿಗೆಹಾರ, ಪುತ್ತೂರು, ಭಾಗಮಂಡಲ, ಆಗುಂಬೆ, ಮಂಕಿ, ಶಿರಾಲಿ, ಲಿಂಗನಮಕ್ಕಿ, ಮಾಣಿ, ಸಿದ್ದಾಪುರ, ಗೇರುಸೊಪ್ಪ, ಬೆಳ್ತಂಗಡಿ, ಶೃಂಗೇರಿ, ಪೊನ್ನಂಪೇಟೆ, ಹೊನ್ನಾವರ, ಉಪ್ಪಿನಂಗಡಿ, ಕಳಸ, ಹುಂಚದಕಟ್ಟೆ, ಕಮ್ಮರಡಿ, ಮೂರ್ನಾಡು, ನಾಪೋಕ್ಲು, ಪಣಂಬೂರು, ಉಡುಪಿ, ಮಂಗಳೂರು, ಕುಮಟಾದಲ್ಲಿ ಮಳೆಯಾಗಿದೆ.
ಯಲ್ಲಾಪುರ, ಬೆಳಗಾವಿ, ಮೂಡಿಗೆರೆ, ಜಯಪುರ, ನಿಪ್ಪಾಣಿ, ಗೋಕರ್ಣ, ಕೋಟ, ಮುಂಡಗೋಡು, ಸಂಕೇಶ್ವರ, ಹುಕ್ಕೇರಿ, ಕೋಟ, ಮಾನ್ವಿ, ಮಸ್ಕಿ, ಧಾರವಾಡ, ಬೈಲಹೊಂಗಲ, ಶಿವಮೊಗ್ಗ, ಎನ್ಆರ್ಪುರ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.
ಎಚ್ಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 28.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.