ಮನೆ ರಾಜ್ಯ ಭಾರಿ ಮಳೆ: ಬೆಂಗಳೂರಿನ ರಸ್ತೆಗಳು ಜಲಾವೃತ- ಸಂಚಾರ ದಟ್ಟಣೆ

ಭಾರಿ ಮಳೆ: ಬೆಂಗಳೂರಿನ ರಸ್ತೆಗಳು ಜಲಾವೃತ- ಸಂಚಾರ ದಟ್ಟಣೆ

0

ಬೆಂಗಳೂರು(Bengaluru): ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಸೋಮವಾರ ಬೆಳಿಗ್ಗೆ ವಿಪರೀತ ಸಂಚಾರ ದಟ್ಟಣೆ ಕಂಡುಬಂದಿದೆ.

ಬೆಂಗಳೂರಿನ ಹೊರ ವರ್ತುಲ ರಸ್ತೆಯ ಇಕೋಸ್ಪೇಸ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಸಂಚಾರ ದಟ್ಟಣೆ ಕಂಡುಬಂದಿದೆ.

ಮಾರತಹಳ್ಳಿ ಹಾಗೂ ಸಿಲ್ಕ್ ಬೋರ್ಡ್ ಜಂಕ್ಷನ್ ರಸ್ತೆಯ ಸಮೀಪ ಜಲಾವೃತಗೊಂಡ ರಸ್ತೆಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ಸೆಕ್ಯೂರಿಟಿ ಗಾರ್ಡ್ ರಕ್ಷಿಸಿದ್ದಾರೆ.

ಕಾಲುವೆಗಳಲ್ಲಿ ನೀರು ತುಂಬಿ ರಸ್ತೆಗಳ ಮೇಲೆಯೇ ನೀರು ಹೊಳೆಯಂತೆ ಹರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಹೊರ ವರ್ತುಲ ರಸ್ತೆ, ಸರ್ಜಾಪುರ ರಸ್ತೆ, ದೊಡ್ಡಕನ್ನಹಳ್ಳಿ ಮತ್ತು ಬೆಳ್ಳಂದೂರು ರಸ್ತೆಯಲ್ಲಿ ಸಂಚರಿಸುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಸಂಚಾರ ಪೊಲೀಸರು ಪ್ರಮಾಣಿಕರಿಗೆ ಮನವಿ ಮಾಡಿದ್ದಾರೆ.