ಬೆಂಗಳೂರು: ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು,ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹಾಗೂ ಆರ್ದ್ರತೆ ಹೆಚ್ಚಾಗಲಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದೆ.
ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿರಲಿದೆ, ಎಚ್ ಎಎಲ್ ನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 40.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.