ರಾಜಸ್ಥಾನ, ಒಡಿಶಾ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಗುಜರಾತ್‌ಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಸೆಪ್ಟೆಂಬರ್ 6 ಮತ್ತು 7ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ರಾಜಸ್ಥಾನದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ದೌಸಾ ಜಿಲ್ಲೆಯ ಸಿಕ್ರಿಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 104 ಮಿ.ಮೀ ಮಳೆಯಾಗಿದೆ. ಅಲ್ಲದೇ ಮುಂದಿನ 4-5 ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.















