ಮನೆ ರಾಜ್ಯ ರಾಜ್ಯದಲ್ಲಿ ಮೇ 21 ರವರೆಗೆ ಭಾರಿ ಮಳೆ ಸಾಧ್ಯತೆ: 19 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮೇ 21 ರವರೆಗೆ ಭಾರಿ ಮಳೆ ಸಾಧ್ಯತೆ: 19 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

0

ಬೆಂಗಳೂರು (Bengaluru)- ರಾಜ್ಯದಲ್ಲಿ ಮೇ 21 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯಿರುವ ಹಿನ್ನೆಲೆಯಲ್ಲಿ 19 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ರಾಜ್ಯದ ಒಳನಾಡು ಪ್ರದೇಶದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಇಂದು (ಮೇ 17) ಮತ್ತು ಮೇ 18ರಂದು ಗುಡುಗು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇಲ್ಮೈ ಸುಳಿಗಾಳಿಯು ಮಧ್ಯಪ್ರದೇಶದಿಂದ ಕರ್ನಾಟಕದ ಒಳನಾಡು ಮಾರ್ಗವಾಗಿ ತಮಿಳುನಾಡಿನತ್ತ ಚಲಿಸುತ್ತಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಗಾಳಿ ಬೀಸುವ ದಿಕ್ಕಿನ ಬದಲಾವಣೆ ಜತೆಗೆ ಲಕ್ಷದ್ವೀಪ ಭಾಗದಲ್ಲಿ ಮತ್ತೊಂದು ಸುಳಿಗಾಳಿ ಇರುವುದರಿಂದ ಕರಾವಳಿ ಜಿಲ್ಲೆಗಳಲ್ಲೂ ಮೇ 21ರವರೆಗೆ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮೇ 18ಕ್ಕೆ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಒಂದು ದಿನ ‘ರೆಡ್ ಅಲರ್ಟ್‌’ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ ಗರಿಷ್ಠ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದೂ ಇಲಾಖೆ ಎಚ್ಚರಿಸಿದೆ.

ಅಸನಿ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಕಳೆದ ವಾರದಿಂದ ಮಳೆ ಸುರಿಯಿತು. ಈಗ ಅದರ ಪ್ರಭಾವ ತಗ್ಗಿದೆ. ಮೇಲ್ಮೈ ಸುಳಿಗಾಳಿ ಹಾಗೂ ಹವಾಮಾನ ವೈಪರೀತ್ಯಗಳಿಂದ ಮಳೆ ಮುಂದುವರಿಯಲಿದೆ. ಸದ್ಯ ದಕ್ಷಿಣ ಅಂಡಮಾನ್ ಸಮುದ್ರ ಭಾಗದಲ್ಲಿ ಮುಂಗಾರು ಪ್ರವೇಶವಾಗಿದೆ. ರಾಜ್ಯಕ್ಕೆ ಮೇ ಅಂತ್ಯದೊಳಗೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಿಂದಿನ ಲೇಖನಶಸ್ತ್ರಾಸ್ತ್ರ ತರಬೇತಿ: ಶಾಲೆಯ ಆಡಳಿತ ಮಂಡಳಿಯಿಂದ ವಿವರಣೆ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ
ಮುಂದಿನ ಲೇಖನದೇಗುಲವಾದರೆ ಹಿಂದೂಗಳಿಗೆ, ದರ್ಗಾವಾದರೆ ಮುಸ್ಲಿಂರಿಗೆ ಬಿಟ್ಟುಕೊಡಿ: ಪೇಜಾವರ ಶ್ರೀ