ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಬೆಳಗಿನಿಂದ ಭಾರೀ ಮಳೆಯಾಗುತ್ತಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜೂನ್ 26 ಮತ್ತು 27 ರಂದು “ಆರೆಂಜ್ ಅಲರ್ಟ್” ನೀಡಲಾಗಿದೆ, ಜೂನ್ 28 ಮತ್ತು 29 ರಂದು “ಯಲ್ಲೋ ಅಲರ್ಟ್” ನೀಡಲಾಗಿದೆ. ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬಲವಾದ ಗಾಳಿಯಿಂದಾಗಿ ಮರಗಳು ಬೀಳುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಮಂಗಳವಾರವೂ ಭಾರೀ ಮಳೆ ಸುರಿದಿದ್ದು ನದಿಗಳು ತುಂಬಿ ಹರಿಯುತ್ತಿವೆ.














