ಬೆಂಗಳೂರು (Bengaluru)- ಇಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಭಾರತೀಯ ಹವಾಮಾನ ಇಲಾಖೆ (IMD), ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಕೇರಳದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಸೈಕ್ಲೋನಿಕ್ ಚಂಡಮಾರುತದ ಪ್ರಭಾವದ ಅಡಿಯಲ್ಲಿ, ಮೇ 4 ಮತ್ತು 5 ರಂದು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ ಮತ್ತು ಮೇ 6 ಮತ್ತು 7 ರಂದು ಅಂಡಮಾನ್ ದ್ವೀಪಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.
ಮೇ 5 ರಂದು ತಮಿಳುನಾಡು ಮತ್ತು ಪುದುಚೇರಿ ಪ್ರದೇಶಗಳಲ್ಲಿ ಮತ್ತು ಮೇ 4 ಮತ್ತು 7 ರ ನಡುವೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೇ 4 ರಂದು ಅಸ್ಸಾಂ-ಮೇಘಾಲಯ ಮತ್ತು ನಾಗಾಲ್ಯಾಂಡ್-ಮಣಿಪುರ-ಮಿಜೋರಾಂ-ತ್ರಿಪುರಾದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.
ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಮಂಗಳವಾರ ಗುಡುಗು ಸಹಿತ ಅತ್ಯಂತ ಹಗುರವಾದ ಮಳೆಯಾಗಿದೆ. ಪೂರ್ವ ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಕಡಿಮೆ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆದರೆ ಮೇ 5 ಮತ್ತು ಮೇ 6 ರಂದು ರಾಜ್ಯದ ಪಶ್ಚಿಮ ಭಾಗದಲ್ಲಿ ಹವಾಮಾನವು ಶುಷ್ಕವಾಗಿರುತ್ತದೆ ಎಂದು ಅದು ಹೇಳಿದೆ.
ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.