ಬೆಂಗಳೂರು (Bengaluru): ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 40–50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಸುತ್ತಮತ್ತಲೂ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.