ಮನೆ ಸುದ್ದಿ ಜಾಲ ಕರಾವಳಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ

ಕರಾವಳಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ

0

ಮಂಗಳೂರು ಮಂಗಳವಾರ (ಮೇ.5) ಕರಾವಳಿ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಸಿಹಿ ಸುದ್ದಿ ನೀಡಿದೆ. (ಮೇ 6)ರ ಬುಧವಾರದಿಂದ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ ಎನ್ನಲಾಗಿದೆ.ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಲಾಗಿದೆ.

ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯುದ್ದಕ್ಕೂ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಈ ಮಳೆಯ ಅವಧಿಯಲ್ಲಿ ಬಿರುಗಾಳಿ ಹಾಗೂ ಸಿಡಿಲು ಸಹಿತ ಗುಡುಗು ಸಂಭವಿಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ. ಇದೇ ಸಮಯದಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಸೋಮವಾರ ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.3 ಡಿ.ಸೆ. ಕಡಿಮೆಯಾಗಿದೆ. ಕನಿಷ್ಠ ತಾಪಮಾನ 26.1 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.8 ಡಿ.ಸೆ. ಹೆಚ್ಚಾಗಿದೆ ಎನ್ನಬಹುದು.

ಈ ಪ್ರಕಾರ ಸೋಮವಾರ ಕರಾವಳಿಯ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದರೂ ಮಳೆಯಾಗಿರಲಿಲ್ಲ. ಆದರೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಈಗಾಗಲೇ ಸಾಧಾರಣ ಮಳೆಯಾಗಿರುವುದು ವರದಿಯಾಗಿದೆ. ಮೇ 6 ಮತ್ತು 7 ರಂದು ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಲಘು ಅಥವಾ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು (ಬೀದರ್, ಕಲಬುರಗಿ, ಯಾದಗಿರಿ) ಈ ಭಾಗದಲ್ಲಿ ಮೇ 7 ರಂದು ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ತಾಪಮಾನದಲ್ಲಿ ಸ್ಥಿರತೆ ಕಂಡುಬರಲಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಾರಾಂತ್ಯದಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗಲಿದ್ದು, ಪ್ರವಾಸಿಗರು ಜಾಗರೂಕರಾಗಿರಲು ಸೂಚಿಸಲಾಗಿದೆ ಎನ್ನಲಾಗಿದೆ.