ಮನೆ ರಾಷ್ಟ್ರೀಯ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ

ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ

0

ನವದೆಹಲಿ: ಸರ್ಕಾರಿ ತೈಲ ಕಂಪನಿಗಳು ಮೇ 1 ರಂದು ವಾಣಿಜ್ಯ ಬಳಕೆಯ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯನ್ನು ಮಾಡಿವೆ.ಇದರೊಂದಿಗೆ ಜೆಟ್ ಇಂಧನ ಬೆಲೆಯನ್ನೂ ಕಡಿತಗೊಳಿಸಲಾಗಿದೆ.

Join Our Whatsapp Group

ತೈಲ ಮಾರುಕಟ್ಟೆ ಕಂಪನಿಗಳು ಇಂದು 19 ಕೆಜಿ ವಾಣಿಜ್ಯ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 172 ರೂ. ಇಳಿಸಿದೆ.

ತೈಲ ಕಂಪನಿಗಳು ಜೆಟ್ ಇಂಧನ (ವಾಯು ಇಂಧನ) ಬೆಲೆಯನ್ನು 2415 ರೂ.ವರೆಗೆ ಕಡಿಮೆ ಮಾಡಿದೆ. ಹೊಸ ದರಗಳು ಮೇ 1 ರಿಂದ ಜಾರಿಗೆ ಬಂದಿವೆ. ಆದರೆ, ಗೃಹಬಳಕೆಯ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ವಾಣಿಜ್ಯ ಗ್ಯಾಸ್ ಸಿಲಿಂಡರ್ ಈ ಹಿಂದೆ ದೆಹಲಿಯಲ್ಲಿ 2028 ರೂ.ಗೆ ಲಭ್ಯವಿತ್ತು, ಆದರೆ, ಈಗ ಅದು 1856.50 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 2132 ರೂ.ಗೆ ಸಿಗುವ ಸಿಲಿಂಡರ್ ಈಗ 1960.50 ರೂ.ಗೆ ಲಭ್ಯವಾಗಲಿದೆ.

ಮುಂಬೈ ಬಗ್ಗೆ ಹೇಳುವುದಾದರೆ, ಈ ಮೊದಲು ವಾಣಿಜ್ಯ ಗ್ಯಾಸ್ ಸಿಲಿಂಡರ್ 1980 ರೂ. ಗೆ ಸಿಗುತ್ತಿತ್ತು. ಈಗ ಅದು 1808.50 ರೂ.ಗೆ ಇಳಿದಿದೆ. ಮತ್ತೊಂದೆಡೆ, ಚೆನ್ನೈನಲ್ಲಿ 2192.50 ರೂ.ಗಳ ಸಿಲಿಂಡರ್ ಗೆ ಈಗ 2021.50 ರೂ.ಗಳನ್ನು ಪಾವತಿಸಬೇಕಾಗುತ್ತದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 14 ಕೆಜಿ ಗೃಹ ಬಳಕೆ ಸಿಲಿಂಡರ್ ಬೆಲೆ 1115.5 ರೂಪಾಯಿ ಆಗಿದ್ದರೆ, 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯೂ 1856 ರೂಪಾಯಿಯಷ್ಟಿದೆ.

ಹಿಂದಿನ ಲೇಖನಸಿಎಫ್ ಟಿಆರ್ ಐ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಹೆಚ್ಚಾಗಲಿದೆ: ಜೆಪಿ ನಡ್ಡಾ