ಮನೆ ಅಂತಾರಾಷ್ಟ್ರೀಯ ಹೆಲಿಕಾಪ್ಟರ್ ದುರಂತ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

ಹೆಲಿಕಾಪ್ಟರ್ ದುರಂತ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

0

ಟೆಹ್ರಾನ್: ಅಜರ್‌ ಬೈಜಾನ್‌ ನಿಂದ ಮರಳುತ್ತಿದ್ದ ವೇಳೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕೊನೆಯುಸಿರೆಳೆದಿದ್ದಾರೆ.

Join Our Whatsapp Group

ರವಿವಾರ ನಡೆದ ಘಟನೆಯಲ್ಲಿ ಇರಾನ್ ಅಧ್ಯಕ್ಷರು ಮೃತಪಟ್ಟಿದ್ದಾರೆ ಎಂದು ಇದೀಗ ಖಚಿತಪಡಿಸಲಾಗಿದೆ.

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹೊಸೇನ್‌ ಅಮೀರಬ್‌ ದೊಲ್ಲಾಹಿಯನ್‌ ಮತ್ತು ಇರಾನ್‌ನ ಪರಮೋಚ್ಚ ನಾಯಕ ಖೊಮೇನಿಯವರ ಪ್ರತಿನಿಧಿ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನವಾಗಿತ್ತು.

ಇರಾನ್ ಮಾಧ್ಯಮಗಳ ಪ್ರಕಾರ, ಹೆಲಿಕಾಪ್ಟರ್‌ನ ಅವಶೇಷಗಳು ಪತ್ತೆಯಾದ ಕೆಲವೇ ನಿಮಿಷಗಳಲ್ಲಿ, ಇರಾನ್ ಅಧ್ಯಕ್ಷ ರೈಸಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ವಿಮಾನದಲ್ಲಿದ್ದ ಇರಾನ್ ವಿದೇಶಾಂಗ ಸಚಿವರೂ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.

ರವಿವಾ ಪರ್ವತಗಳಲ್ಲಿ ಪತನಗೊಂಡ ಹೆಲಿಕಾಪ್ಟರ್‌ ನ ಅವಶೇಷಗಳನ್ನು ರಕ್ಷಣಾ ತಂಡ ಪತ್ತೆ ಮಾಡಿದೆ.

ಅಧ್ಯಕ್ಷರ ಹೆಲಿಕಾಪ್ಟರ್‌ಗೆ ಬೆಂಗಾವಲಾಗಿ ತೆರಳಿದ್ದ ಇನ್ನೆರಡು ಹೆಲಿಕಾಪ್ಟರ್‌ಗಳು ವಾಪಸಾಗಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ಸಂಭವಿಸಿದ ಸ್ಥಳ ಇರಾನ್‌ ನ ದೊಡ್ಡ ಪಟ್ಟಣಗಳಲ್ಲಿ ಒಂದಾಗಿರುವ ತಬ್ರಿಜ್‌ ನಿಂದ ಸುಮಾರು 100 ಕಿ.ಮೀ. ದೂರದಲ್ಲಿದೆ. ಪ್ರತಿಕೂಲ ಹವಾಮಾನ, ರಾತ್ರಿಯಾದ ಕಾರಣ ಶೋಧ ಕಾರ್ಯಕ್ಕೆ ಅಡ್ಡಿಯಾಗಿತ್ತು.

ಹಿಂದಿನ ಲೇಖನರಾಜ್ಯದಲ್ಲಿ ಮೇ 22 ರವರೆಗು ಮಳೆ: 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
ಮುಂದಿನ ಲೇಖನವರ್ಷ ಪೂರೈಸಿದ ಸಿದ್ದರಾಮಯ್ಯ ಸರ್ಕಾರ: ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ- ವಿಜಯೇಂದ್ರ ಟೀಕೆ