ಮನೆ ರಾಜ್ಯ ತುಮಕೂರು ಜಿಲ್ಲೆಗೆ ಹೇಮಾವತಿ ನೀರು: ಕೆ.ಗೋಪಾಲಯ್ಯ

ತುಮಕೂರು ಜಿಲ್ಲೆಗೆ ಹೇಮಾವತಿ ನೀರು: ಕೆ.ಗೋಪಾಲಯ್ಯ

0

ತುಮಕೂರು(Tumkur):  ಇಂದು ರಾತ್ರಿ ಜಿಲ್ಲೆಗೆ ಹೇಮಾವತಿ ನೀರು ಹರಿಸಲು ಸರ್ಕಾರ ಮುಂದಾಗಿರುವುದಾಗಿ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಷ್ಟು ದಿನ ನಾಲೆಯಲ್ಲಿ ಕಾಮಗಾರಿ ನಡೆಯುತ್ತಿತ್ತು. ಹಾಗಾಗಿ ನೀರು ಬಿಡಲು ಸಾಧ್ಯವಾಗಿರಲಿಲ್ಲ. ಈಗಾಗಲೇ ನೀರು ಬಿಡುವ ಕುರಿತು ಸಭೆ ಮಾಡಲಾಗಿದೆ. ಜಿಲ್ಲೆಗೆ ಅಗತ್ಯ ನೀರನ್ನು ಬಿಡಲಾಗುತ್ತದೆ. ಬುಗುಡನಹಳ್ಳಿ ಸೇರಿದಂತೆ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಾಗುವುದು ಎಂದರು.

ಜುಲೈ 17ರಂದು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದಲ್ಲಿ ಬಸವಣ್ಣ, ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಪ್ರತಿಮೆ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಹಿಂದಿನ ಲೇಖನವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ವಿಧಿಸಿ ಸುಪ್ರೀಂಕೋರ್ಟ್ ಆದೇಶ
ಮುಂದಿನ ಲೇಖನಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಸರ್ಕಾರದಿಂದ ಜನರ ತೆರಿಗೆ ಹಣ ಲೂಟಿ: ಹೆಚ್.ಡಿ.ಕುಮಾರಸ್ವಾಮಿ