ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತೊಂದು ಬಹುಕೋಟಿ ಒಪ್ಪಂದದ ಮೂಲಕ ಜರ್ಮನ್ ಕ್ರೀಡಾ ಸಾಮಗ್ರಿಗಳ ಕಂಪನಿ ಅಡಿಡಾಸ್ ಸಂಸ್ಥೆಯೊಂದಿಗೆ ಕಿಟ್ ಪ್ರಾಯೋಜಕತ್ವಕ್ಕೆ ಸಹಿ ಹಾಕಿದೆ.
ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.
ವರದಿಗಳ ಪ್ರಕಾರ, ಈ ಜರ್ಮನ್ ಕಂಪನಿ 5 ವರ್ಷಕ್ಕೆ ಬಿಸಿಸಿಐಗೆ 350 ಕೋಟಿ ರೂ. ನೀಡಲಿದೆ. ಈ ಒಪ್ಪಂದದ ಪ್ರಕಾರ ಇನ್ನುಮುಂದೆ ಟೀಮ್ ಇಂಡಿಯಾ ಆಟಗಾರರು ತೊಡುವ ಜೆರ್ಸಿಯ ಮೇಲೆ ಅಡಿಡಾಸ್ ಕಂಪನಿಯ ಲೋಗೋ ಇರಲಿದೆ.
“ಕಿಟ್ ಪ್ರಾಯೋಜಕರಾಗಿ ಅಡಿಡಾಸ್ ಜೊತೆಗೆ ಬಿಸಿಸಿಐ ಪಾಲುದಾರಿಕೆಯನ್ನು ಘೋಷಿಸಲು ಸಂತೋಷವಾಗಿದೆ. ನಾವು ಕ್ರಿಕೆಟ್ ಆಟವನ್ನು ಬೆಳೆಸಲು ಬದ್ಧರಾಗಿದ್ದೇವೆ ಮತ್ತು ವಿಶ್ವದ ಪ್ರಮುಖ ಕ್ರೀಡಾ ಉಡುಪುಗಳ ಬ್ರ್ಯಾಂಡ್ಗಳಲ್ಲಿ ಒಂದಾಗಿರುವ ಅಡಿಡಾಸ್ ಜೊತೆ ಪಾಲುದಾರರಾಗಲು ಹೆಚ್ಚು ಉತ್ಸುಕರಾಗಿದ್ದೇವೆ ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.














