ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಐದು ಪಂದ್ಯಗಳ ಟಿ20 ಸರಣಿಯನ್ನು 3-2 ಅಂತರದಿಂದ ಕಳೆದುಕೊಂಡಿದ್ದ ಟೀಂ ಇಂಡಿಯಾ ಇದೀಗ ಐರ್ಲೆಂಡ್ ಪ್ರವಾಸದಲ್ಲಿ ಗೆಲುವಿನ ಶುಭಾರಂಭ ಮಾಡಿದೆ.
ಮೊದಲ ಬಾರಿಗೆ ಭಾರತ ಟಿ20 ತಂಡದ ನಾಯಕತ್ವವಹಿಸಿದ್ದ ವೇಗಿ ಜಸ್ಪ್ರೀತ್ ಬುಮ್ರಾ ನೇತೃತ್ವದಲ್ಲಿ ಟೀಂ ಇಂಡಿಯಾ ಮಳೆ ಪೀಡಿತ ಈ ಪಂದ್ಯವನ್ನು 2 ರನ್ ಗಳಿಂದ ಗೆದ್ದುಕೊಂಡಿದೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡ ಬ್ಯಾರಿ ಮೆಕಾರ್ಥಿ ಅವರ ಚೊಚ್ಚಲ ಅರ್ಧಶತಕದ ನೆರವಿನಿಂದಾಗಿ 139 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ 2 ವಿಕೆಟ್ ಕಳೆದುಕೊಂಡು 47 ರನ್ ಕಲೆಹಾಕಿದ್ದಾಗ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿತು. ಪಂದ್ಯ ನಿಲ್ಲುವ ವೇಳೆಗೆ ಭಾರತ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 2 ರನ್ಗಳಿಂದ ಮುಂದಿತ್ತು. ಹೀಗಾಗಿ ಟೀಂ ಇಂಡಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು.
ಇನ್ನು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯ ಮುಗಿದಿದ್ದು, ಇದೀಗ ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಟಿ20 ಪಂದ್ಯವು ಭಾನುವಾರ, ಆಗಸ್ಟ್ 20 ರಂದು ನಡೆಯಲಿದೆ. ಭಾನುವಾರ ನಡೆಯಲಿರುವ ಎರಡನೇ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಉದ್ದೇಶದಿಂದ ಭಾರತ ಮೈದಾನಕ್ಕಿಳಿಯಲಿದೆ. ಇತ್ತ ಐರ್ಲೆಂಡ್ ಕೂಡ 2ನೇ ಟಿ20 ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಲು ಪ್ರಯತ್ನಿಸಲಿದೆ.
ಭಾರತ ಮತ್ತು ಐರ್ಲೆಂಡ್ ನಡುವಿನ 2ನೇ ಟಿ20 ಪಂದ್ಯ ಆಗಸ್ಟ್ 20 ರಂದು ನಡೆಯಲಿದೆ.
ಭಾರತ ಮತ್ತು ಐರ್ಲೆಂಡ್ ನಡುವಿನ 2ನೇ ಟಿ20 ಪಂದ್ಯಕ್ಕೆ ಡಬ್ಲಿನ್‌ನ ವಿಲೇಜ್ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಭಾರತ ಮತ್ತು ಐರ್ಲೆಂಡ್ ನಡುವಿನ 2ನೇ ಟಿ20 ಪಂದ್ಯದ JioCinema ಅಪ್ಲಿಕೇಶನ್ ನಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ. ಕ್ರಿಕೆಟ್ ಅಭಿಮಾನಿಗಳು Sports18 ನಲ್ಲಿ ಲೈವ್ ಆಕ್ಷನ್ ಅನ್ನು ವೀಕ್ಷಿಸಬಹುದಾಗಿದೆ.
ಉಭಯ ತಂಡಗಳ ಮಾಹಿತಿ
ಟೀಂ ಇಂಡಿಯಾ: ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಯಶಸ್ವಿ ಜೈಸ್ವಾಲ್ , ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್.
ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ರಾಸ್ ಅಡೈರ್, ಹ್ಯಾರಿ ಟೆಕ್ಟರ್, ಗರೆಥ್ ಡೆಲಾನಿ, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಫಿಯಾನ್ ಹ್ಯಾಂಡ್, ಲೋರ್ಕನ್ ಟಕರ್ (ವಿಕೆಟ್ ಕೀಫರ್), ಮಾರ್ಕ್ ಅಡೈರ್, ಜೋಶುವಾ ಲಿಟಲ್, ಬ್ಯಾರಿ ಮೆಕಾರ್ಥಿ, ಥಿಯೋ ವ್ಯಾನ್‌ಕೋಮ್, ಬೆಂಜಮಿನ್ ವೈಟ್, ಕ್ರೇಗ್ ಯಂಗ್.