ಮನೆ ರಾಜ್ಯ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂ.ಪ.ನಾಗರಾಜಯ್ಯ ರಾಜೀನಾಮೆ

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂ.ಪ.ನಾಗರಾಜಯ್ಯ ರಾಜೀನಾಮೆ

0

ಬೆಂಗಳೂರು(Bengaluru): ನಾಡಗೀತೆ ಮತ್ತು ಕುವೆಂಪು ಅವರಿಗೆ ಅವಮಾನ ಮಾಡಿದ್ದರೂ ಅಂತಹ ವ್ಯಕ್ತಿ( ರೋಹಿತ್ ಚಕ್ರತೀರ್ಥ) ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಬೇಸರ ವ್ಯಕ್ತಪಡಿಸಿರುವ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕುರಿತು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಂಪನಾ ಪತ್ರ ಬರೆದಿದ್ದಾರೆ.

ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಮಹಾಕವಿ ಕುವೆಂಪು. ಕನ್ನಡಕ್ಕೆ ಜ್ಞಾನಪೀಠ ತಂದ ಮೊದಲಿಗರು ಅವರು.  ಇದನ್ನರಿತು ಸರ್ಕಾರ ರಾಷ್ಟ್ರಕವಿ ಕುವೆಂಪು ಪ್ರತಿಷ್ಟಾನವನ್ನು ಪ್ರಾರಂಭಿಸಿತಲ್ಲದೇ ಅತ್ಯುನ್ನತ  ಕರ್ನಾಟಕ ರತ್ನ ಪ್ರಶಸ್ತಿಯನ್ನಿತು ಗೌರವಿಸಿತು.

ಆದರೆ ಇಂದು ಕುವೆಂಪು ಅವರು ಹುಟ್ಟಿದ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವ ಬದಲು ಸರ್ಕಾರ ಜವಬ್ದಾರಿ ಸ್ಥಾನ ನೀಡಿದೆ. ಇದು ಅಪಾಯಕಾರಿ ಬೆಳವಣಿಗೆ.

ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರ್ಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದವಕಾಶಗಳಿವೆ ಎಂಬ ತಪ್ಪು ಸಂದೇಶ ರವಾನೆ ಮಾಡಿದಂತಾಗಿದೆ. ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ.ಆದ್ದರಿಂದ ಸರ್ಕಾರ ಸ್ಥಾಪಿಸಿರುವ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸದ್ಯತ್ವ ಸ್ಥಾನಕ್ಕೆ ತಾನು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸುವಂತೆ ಹಂ.ಪ.ನಾಗರಾಜಯ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.