ರಾಮನಗರ: ಮುಖ್ಯಮಂತ್ರಿ ಯಾರು ಅನ್ನುವುದನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ ಮಾಡದೇ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಡಿಕೆ ಶಿವಕುಮಾರ್ ಅವರ ತವರು ಜಿಲ್ಲೆ ರಾಮನಗರದಲ್ಲಿ ಹೈ ಅಲರ್ಟ್ ಆಗಿರುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಿದ್ದರಿಂದ ಅವರ ಅಭಿಮಾನಿಗಳು ಗಲಾಟೆ ಮಾಡುವ ಸಾಧ್ಯತೆಗಳು ಇವೆ. ಇದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಂದೇಶ ರವಾನಿಸಲಾಗಿದೆ.
ರಾಮನಗರದ ಐಜೂರು ವೃತ್ತದಲ್ಲಿ ಒಂದು ಕೆಎಸ್ಆರ್ ಪಿ ತುಕಡಿ, ಒಬ್ಬರು ಸಬ್ ಇನ್ ಸ್ಪೆಕ್ಟರ್ ಹಾಗೂ ಪೊಲೀಸ್ ಸಿಬಂದಿಯನ್ನು ನಿಯೋಜಿಸಲಾಗಿದೆ.














