ಮನೆ ಕಾನೂನು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟಿನಲ್ಲಿ ಮಂಗಳವಾರ (ಅ.22ರಂದು) ನಡೆದಿದೆ.

Join Our Whatsapp Group

ಸಿಸಿಹೆಚ್‌ ನ್ಯಾಯಾಲಯದಲ್ಲಿ ದರ್ಶನ್‌ ಜಾಮೀನಿಗೆ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ ಹೈಕೋರ್ಟಿನಲ್ಲಿ ವಾದವನ್ನು ಮಂಡಿಸಿದ್ದಾರೆ.

ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು.

ದರ್ಶನ್‌ ಪರ ವಕೀಲರು, ದರ್ಶನ್‌ ಅವರ ಆರೋಗ್ಯ ವಿಚಾರವನ್ನು ನ್ಯಾಯಧೀಶರ ಮುಂದೆ ಪ್ರಸ್ತಾಪಿಸಿದ್ದಾರೆ.

ದರ್ಶನ್​ ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದು, ಅವರನ್ನು ನಿನ್ನೆ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದರ್ಶನ್​ಗೆ ಚಿಕಿತ್ಸೆಯ ಅಗತ್ಯವಿದೆ. ಹಾಗಾಗಿ ಜಾಮೀನು ಕೋರುತ್ತಿದ್ದೇವೆ ಎಂದು ನ್ಯಾಯಧೀಶರ ಮುಂದೆ ಹೇಳಿದ್ದಾರೆ.

ಸಿವಿ ನಾಗೇಶ್‌ ಅವರ ವಾದವನ್ನು ಆಲಿಸಿದ ನ್ಯಾಯಧೀಶರು ದರ್ಶನ್‌ ಅವರ ಆರೋಗ್ಯ ಸ್ಥಿತಿಯ ವರದಿಯನ್ನು ಕೇಳಿ, ಆ ಬಳಿಕ ವಿಚಾರಣೆಯನ್ನು ಅಕ್ಟೋಬರ್‌ 28ಕ್ಕೆ ಮುಂದೂಡಿದ್ದಾರೆ.

ಈ ಹಿಂದೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಅ.14ರಂದು 57ನೇ ಸಿಸಿಎಚ್‌ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿತು. ಎ2 ಆರೋಪಿ ದರ್ಶನ್, ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಜಾ ಮಾಡಲಾಗಿತ್ತು. ಎ 11 ನಾಗರಾಜು, ಎ 12 ಲಕ್ಷ್ಮಣ್ ಅವರ ಜಾಮೀನು ಅರ್ಜಿಯನ್ನೂ ವಜಾ ಮಾಡಿತು. ಇದೆ ವೇಳೆ ಎ 8 ರವಿಶಂಕರ್, ಎ 13 ದೀಪಕ್ ಗೆ ಜಾಮೀನು ಮಂಜೂರು ಮಾಡಿತು.