ಮನೆ ಕಾನೂನು ಮತದಾನ ಮಾಡಿದವರಿಗೆ ಉಚಿತ ಆಹಾರದ ಕೊಡುಗೆ ನೀಡಲು ಹೋಟೆಲ್ ​​ಗಳಿಗೆ ಹೈಕೋರ್ಟ್ ಅನುಮತಿ

ಮತದಾನ ಮಾಡಿದವರಿಗೆ ಉಚಿತ ಆಹಾರದ ಕೊಡುಗೆ ನೀಡಲು ಹೋಟೆಲ್ ​​ಗಳಿಗೆ ಹೈಕೋರ್ಟ್ ಅನುಮತಿ

0

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಶುಕ್ರವಾರ ನಡೆಯಲಿದೆ.

Join Our Whatsapp Group

ಆ ದಿನ ಮತದಾನ ಮಾಡಿ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತೋರಿಸಿದವರಿಗೆ ಉಚಿತವಚವಾಗಿ ಆಹಾರ ನೀಡಲು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್‌ನ ಸದಸ್ಯರಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

ಈ ವಿಚಾರವಾಗಿ ಹೈಕೋರ್ಟ್​ ಮಂಗಳವಾರ ಮಧ್ಯಂತರ ಆದೇಶ ನೀಡಿದೆ. ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರಿನ ಕೆಲವು ಹೋಟೆಲ್​ಗಳು ಕಳೆದ ವರ್ಷ ವಿಧಾನಸಭೆ ಚುನಾವಣೆ ವೇಳೆಯೂ ಇದೇ ರೀತಿಯ ಪ್ರಯತ್ನ ಮಾಡಿದ್ದವು.

ಹೋಟೆಲ್​​ಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಧ್ಯಂತರ ಆದೇಶ ನೀಡಿದ್ದಾರೆ.

ಅರ್ಜಿದಾರರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಬಾರದು ಎಂಬ ಷರತ್ತಿನೊಂದಿಗೆ, ಅರ್ಜಿದಾರರ ಸಂಘ ಮತ್ತು ಅದರ ಸದಸ್ಯರು 2024 ರ ಏಪ್ರಿಲ್ 26, ರಂದು ಬೆಂಗಳೂರಿನಲ್ಲಿ ಮತದಾರರಿಗೆ ಉಚಿತ ಆಹಾರವನ್ನು ವಿತರಿಸಲು ಅನುಮತಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿದ್ದು ಈ ಕೆಲಸ ಮಾಡುತ್ತಿಲ್ಲ. ಮತ ಚಲಾಯಿಸಿದವರಿಗೆ ಮಾತ್ರ ಈ ರೀತಿಯ ಉಚಿತ ಆಹಾರ ನೀಡಲಾಗುತ್ತದೆ ಎಂದು ಅರ್ಜಿದಾರರು ಹೈಕೋರ್ಟ್​ ಗೆ ಸಲ್ಲಿಸಿದ್ದ ಮನವಿಯಲ್ಲಿ ಉಲ್ಲೇಖಿಸಿದ್ದರು.

ಬೆಂಗಳೂರು ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಕಡಿಮೆ ಮತದಾನವಾಗುತ್ತಿದೆ. ಹೀಗಾಗಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮಾತ್ರ ಈ ವಿಧಾನವನ್ನು ಅನುಸರಿಸುತ್ತಿದ್ದೇವೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ವೇಳೆ ಉಚಿತ ಆಹಾರ ನೀಡಲಾಗಿತ್ತು. ಆಗಲೂ ನಮ್ಮ ವಿರುದ್ಧ ಯಾವುದೇ ನಿಯಮ ಉಲ್ಲಂಘನೆಯ ದೂರುಗಳು ದಾಖಲಾಗಿಲ್ಲ ಎಂದು ಅರ್ಜಿದಾರರು ಕೋರ್ಟ್ ​​ಗೆ ತಿಳಿಸಿದ್ದರು.

ಹಿಂದಿನ ಲೇಖನಜಿಬೂಟಿಯಲ್ಲಿ ದೋಣಿ ಪಲ್ಟಿಯಾಗಿ 21 ಮಂದಿ ಸಾವು: 23 ಜನರು ನಾಪತ್ತೆ
ಮುಂದಿನ ಲೇಖನಬೆಂಗಳೂರು: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ