ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ನಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ಗದ್ದಲವುಂಟು ಮಾಡಿದ್ದ ಕುರಿತು ಬೇಷರತ್ ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ವಕೀಲ ಕೆ.ಎನ್.ಜಗದೀಶ್ ವಿರುದ್ಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣವನ್ನು ಹೈಕೋರ್ಟ್ ಕೈಬಿಟ್ಟಿದ್ದು, 2 ಲಕ್ಷ ದಂಡವನ್ನು ವಿಧಿಸಿದೆ.
ಮುಖ್ಯ ನ್ಯಾಯಾಮೂರ್ತಿ ಬಿ.ಪಿ. ವರ್ಲೆ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ಅರ್ಜಿ ವಿಚಾರಣೆ ನಡೆಸಿತು.
ಜಗದೀಶ್ ಪರ ವಕೀಲರು ಪ್ರಮಾಣ ಪತ್ರ ಸಲ್ಲಿಸಿ, ಆದ ಘಟನೆಗೆ ಕ್ಷಮಾಪಣೆ ಕೋರಲಾಗುವುದು. ಇನ್ನು ಮುಂದೆ ಕೋರ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಆ ರೀತಿ ನಡೆದುಕೊಳ್ಳುವುದಿಲ್ಲ ಎಂದರು.
ದಂಡದ ಮೊತ್ತವನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ 1 ಲಕ್ಷ ರೂ. ಮತ್ತು ವಕೀಲರ ಸಂಘದ ಗ್ರಂಥಾಲಯ ಅಭಿವೃದ್ಧಿಗೆ 50 ಸಾವಿರ ರೂ., ಹೈಕೋರ್ಟ್ ಗುಮಾಸ್ತರ ಕ್ಷೇಮಾಭಿವೃದ್ಧಿ ಸಂಘಕ್ಕೆ 50 ಸಾವಿರ ರೂ., ಗಳನ್ನು 2 ವಾರಗಳಲ್ಲಿ ಪಾವತಿಸಬೇಕೆಂದು ನಿರ್ದೇಶನ ನೀಡಿತು. ಈ ಆದೇಶವನ್ನು ಪಾಲಿಸಿರುವ ಕುರಿತು ಡಿ.16 ರಂದು ವಿವರಿಸಬೇಕು ಎಂದು ಸೂಚನೆ ನೀಡಿದೆ.