ಮನೆ Uncategorized ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

0

ಮೈಸೂರು: ಉದಯಗಿರಿ ಗಲಭೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಮೈಸೂರಿನಲ್ಲಿ  ಬಿಜೆಪಿ ಪ್ರತಿಭಟನೆಗೆ ಹೈಕೋರ್ಟ್ ಷರತ್ತು ಬದ್ಧ ಅನುಮತಿ ನೀಡಿದೆ.

Join Our Whatsapp Group

ಉದಯಗಿರಿ ಗಲಭೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಪ್ರತಿಭಟನೆಗೆ ಅನುಮತಿ ನೀಡಲು ನಿರಾಕರಿಸಿದ್ದನ್ನ ಪ್ರಶ್ನಿಸಿ ಬಿಜೆಪಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಬಿಜೆಪಿ ಪ್ರತಿಭಟನೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಪುಟ್ ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಸಮ್ಮತಿ  ನೀಡಿದ್ದು, ಧರಣಿಯಲ್ಲಿ 300 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಧರಣಿ ವೇಳೆ ಪ್ರಚೋದನಾಕಾರಿ ಹೇಳಿಕೆ ನೀಡಬಾರದು. 1 ಲಕ್ಷ ರೂ.  ಬಾಂಡ್ ನೀಡಲು ಆಯೋಜಕರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಹಾಗೆಯೇ ಪ್ರತಿಭಟನೆ ವೇಳೆ ಅಹಿಕರ ಘಟನೆ ನಡೆದರೇ ಅರ್ಜಿದಾರರೇ ಹೊಣೆ.  ಮಧ್ಯಾಹ್ನ 3.30ರಿಂದ ಪ್ರತಿಭಟನೆಗೆ ಅವಕಾಶ ನೀಡಿದ್ದು, ಪ್ರತಿಭಟನೆ ಶಾಂತಿಯುತವಾಗಿರಬೇಕು. ವಿಡಿಯೋ ಮಾಡಿಬೇಕು ಎಂದು  ಮೈಸೂರು ಪೊಲೀಸ್ ಆಯುಕ್ತರಿಗ ಹೈಕೋರ್ಟ್ ನಿರ್ದೇಶನ ನೀಡಿದೆ.