Saval TV on YouTube
ಬೆಂಗಳೂರು: ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದತ್ತಪೀಠದಲ್ಲಿ ಡಿ.6,7 ಮತ್ತು 8ರಂದು ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಪ್ರಕರಣದ ಕುರಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಈಗಾಗಲೇ ನಿರ್ವಹಣಾ ಸಮಿತಿ ರಚಿಸಲಾಗಿದೆ. ಹಿಂದೂ-ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಆಗಿದೆ. ಪ್ರತಿ ದಿನ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿ ಆಚರಣೆಗೆ ಅನುಮತಿ ನೀಡಬೇಕು ಸರ್ಕಾರದ ಮನವಿ ಮಾಡಿತ್ತು.