ಮನೆ ಕಾನೂನು ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಆದೇಶಕ್ಕೆ ಹೈಕೋರ್ಟ್ ತಡೆ

ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಆದೇಶಕ್ಕೆ ಹೈಕೋರ್ಟ್ ತಡೆ

0

ಬೆಂಗಳೂರು: ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ಇಂದು ಮಧ್ಯಂತರ ತಡೆ ನೀಡಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿದ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ ಟ್ರಸ್ಟ್ ಹಾಗೂ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ನಡೆದಿತ್ತು.
೨೦೨೧ರ ಆಗಸ್ಟ್ ೭ ಮತ್ತು ಸೆ. ೧೫ ರಂದು ಹೊರಡಿಸಲಾಗಿದ್ದ ಎರಡು ಆದೇಶಗಳಿಗೆ ನ್ಯಾಯಪೀಠ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಹಾಗೂ ಅದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಕುರಿತು ಉಲ್ಲೇಖಗಳಿಲ್ಲ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಹಿಂದಿನ ಲೇಖನಕೆಜಿಎಫ್: ಚಾಪ್ಟರ್- 2 ಚಿತ್ರ ತಂಡದಿಂದ ಮತ್ತೊಂದು ಸಾಂಗ್​​ ರಿಲೀಸ್​
ಮುಂದಿನ ಲೇಖನಯುವಕನ ಕೊಲೆ ಪ್ರಕರಣ: ದಲಿತ ಯುವಕ ಎಂದ ಸಚಿವರು, ಹಿಂದೂ ಯುವಕ ಎಂದು ಹೇಳಲಿಲ್ಲ ಏಕೆ?: ಹೆಚ್ ಡಿಕೆ