ಬೆಂಗಳೂರು(Bengaluru): ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.
ಅಲ್ಲದೇ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಆದೇಶಿಸಿದೆ.
2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ಸರ್ಕಾರ ಎಸಿಬಿ ರಚಿಸಿತ್ತು.ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಂತರ ಇಂದು ನ್ಯಾ. ಬಿ ವೀರಪ್ಪ ಹಾಗೂ ನ್ಯಾ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ಈ ಆದೇಶ ಮಾಡಿದೆ.
ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.
Saval TV on YouTube