ಬೆಂಗಳೂರು: ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್) ಹೊರತುಪಡಿಸಿ ಬೆಂಗಳೂರಿನ ಯಾವುದೇ ಭಾಗದಲ್ಲೂ ರಾಜಕೀಯ ಪಕ್ಷ ಹಾಗೂ ಸಂಘಟನೆಗಳು ಪ್ರತಿಭಟನೆ ನಡೆಸಬಾರದು” ಎಂದು ಹೈಕೋರ್ಟ್ ಆದೇಶಿಸಿದೆ.
ಪ್ರತಿಭಟನೆ-ಪಾದಯಾತ್ರೆಗಳಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವ ಕುರಿತಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.”ರಾಜಕೀಯ ಪಕ್ಷಗಳು ಅಥವಾ ಸಂಘಟನೆಗಳು ಪ್ರತಿಬಾರಿ ಪಾದಯಾತ್ರೆ-ಪ್ರತಿಭಟನೆ ಕೈಗೊಂಡಾಗಲೂ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ” ಎಂಬ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.
Advertisement
