ಮನೆ ಕಾನೂನು ಆನ್ ಲೈನ್ ಜೂಜು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಆನ್ ಲೈನ್ ಜೂಜು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್

0

ಬೆಂಗಳೂರು: ಆನ್‌ಲೈನ್ ಜೂಜು, ಗೇಮ್ ಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ಸೋಮವಾರ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠ ರದ್ದುಪಡಿಸಿದೆ.

ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಪ್ರಶ್ನಿಸಿ ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ ಮತ್ತು ಇತರರು ಸಲ್ಲಿಸಿದ ಅರ್ಜಿ ವಿಚಾರಣೆ ಪೀಠ ಈ ತೀರ್ಪು ನೀಡಿದೆ.

ಈ ತಿದ್ದುಪಡಿ ಸಂವಿಧಾನಬಾಹಿರವೆಂದು ಹೇಳಿರುವ ಹೈಕೋರ್ಟ್, ಸರ್ಕಾರ ನಿಯಮಾನುಸಾರ ಹೊಸ ಕಾಯಿದೆ ಮಾಡಬಹುದೆಂದು ಹೇಳಿದೆ.

ರಾಜ್ಯ ಸದ್ಯ ಆನ್ ಲೈನ್ ಗೇಮಿಂಗ್ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು, ಅವುಗಳ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಭಾರಿ ಹಿನ್ನೆಡೆಯಾಗಿದೆ.