ಮನೆ ಕಾನೂನು ನಟ ಚೇತನ್ ವಿರುದ್ಧದ ಎಫ್’ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ

ನಟ ಚೇತನ್ ವಿರುದ್ಧದ ಎಫ್’ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ

0

ಬೆಂಗಳೂರು:  ರಿಶಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಚೇತನ್ ಕುರಿತು ದಾಖಲಾಗಿದ್ದ  ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಕೆಜಿಎಫ್ ದಾಖಲೆ ಮುರಿದು ಯಶಸ್ವಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಚಿತ್ರದಲ್ಲಿನ ಭೂತಕೋಲದ ಬಗ್ಗೆ ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಸಂಬಂಧ ನಗರದ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಬಜರಂಗದಳದ ಕಾರ್ಯಕರ್ತ ಶಿವಕುಮಾರ್ ಎಂಬುವರು ದೂರು ನೀಡಿದ್ದರು. ಶಿವಕುಮಾರ್ ದೂರಿನ ಹಿನ್ನಲೆಯಲ್ಲಿ ಅಕ್ಟೋಬರ್ 22ರಂದು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ನಟ ಚೇತನ್ ವಿರುದ್ಧ ತನಿಖೆ ಕೈಗೊಂಡಿದ್ದರು. ಆದರೆ ಈ ಪ್ರಕರಣವನ್ನು ರದ್ದು ಪಡಿಸುವಂತೆ ನಟ ಚೇತನ್ ಅರ್ಜಿ ಸಲ್ಲಿಸಿದ್ದರು.

ನಿನ್ನೆ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್’[ನ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ನ್ಯಾಯಪೀಠವು, ಈ ಪ್ರಕರಣ ತನಿಖಾ ಹಂತದಲ್ಲಿದೆ. ಈ ವೇಳೆ ನ್ಯಾಯಾಲಯದ ಹಸ್ತಕ್ಷೇಪ ಸರಿಯಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿತು.

ಅಲ್ಲದೇ ಈ ಹಿಂದಿನ ಹಲವು ತೀರ್ಪುಗಳನ್ನು ಆಧರಿಸಿ ಅರ್ಜಿಯನ್ನು ವಜಾಗೊಳಿಸಿದೆ.