ಮನೆ ಕಾನೂನು ಸಿ ಎಂ ಸಿದ್ದರಾಮಯ್ಯ ಗೆ ಹೈಕೋರ್ಟ್  ರಿಲೀಫ್

ಸಿ ಎಂ ಸಿದ್ದರಾಮಯ್ಯ ಗೆ ಹೈಕೋರ್ಟ್  ರಿಲೀಫ್

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ್ ನೀಡಿದೆ. ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

Join Our Whatsapp Group

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಗುತ್ತಿಗೆದಾರ ಸಂತೋಷ್, ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಅಂದಿನ ಸಿಎಂ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯಕ್ಕೆ ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸರು ಚಾರ್ಜ್‍ ಶೀಟ್ ಸಲ್ಲಿಸಿದ್ದರು. ಇದನ್ನ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‍ ನಲ್ಲಿ  ಪ್ರಶ್ನೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ  ಮಧ್ಯಂತರ ತಡೆ ಸಿಕ್ಕಿದೆ.