ಮನೆ ರಾಜ್ಯ ಮನೆಯ ಬೀಗ ಮುರಿದು ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ..!

ಮನೆಯ ಬೀಗ ಮುರಿದು ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ..!

0

ಬೀದರ್ : ಮನೆಯ ಬೀಗ ಮುರಿದು 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಬಾಲಾಜಿ ನಗರದಲ್ಲಿ ನಡೆದಿದೆ.

ಜಾಲೇಂದರ್ ಭೀಮಣ್ಣ ಮತ್ರೆ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಕಳ್ಳರು ಕೈಚಳಕ ತೋರಿಸಿದ್ದಾರೆ. 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ 250 ಗ್ರಾಂ ಬೆಳ್ಳಿ ಆಭರಣಗಳು ಕದ್ದು ಪರಾರಿಯಾಗಿದ್ದಾರೆ.

ಮಾಲೀಕರು ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಶ್ವಾನದಳದಿಂದ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.