ಬೆಂಗಳೂರು: ಸಿದ್ದಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಶ್ರೀಗಳಿಗೆ ಭಾರತ ರತ್ನ ನೀಡಲು ಪ್ರಧಾನಮಂತ್ರಿಗೆ ನಿರ್ದೇಶನ ನೀಡುವಂತೆ ರೆಹಾನ್ ಖಾನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ. ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.