ಮನೆ ರಾಜಕೀಯ ಸಾರ್ವಜನಿಕ ಸ್ಥಳದಲ್ಲೂ ಹಿಜಾಬ್ ನಿಷೇಧ: ಬಿಜೆಪಿ ಮುಖಂಡ

ಸಾರ್ವಜನಿಕ ಸ್ಥಳದಲ್ಲೂ ಹಿಜಾಬ್ ನಿಷೇಧ: ಬಿಜೆಪಿ ಮುಖಂಡ

0

ಉಡುಪಿ (Udupi)-ಕಾಲೇಜುಗಳಲ್ಲಿ ಮಾತ್ರವಲ್ಲ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳದಲ್ಲಿಯೂ ಹಿಜಾಬ್ ನಿಷೇಧಿಸಲಾಗುತ್ತದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮುಂದಿನ ದಿನಗಳಲ್ಲಿ ಹಿಜಾಬ್ ಅನ್ನು ಶಾಲೆಗಳಲ್ಲಿ ಮಾತ್ರವಲ್ಲ ಎಲ್ಲಾ ಸಾರ್ವಜನಿಕ ಪ್ರದೇಶದಲ್ಲಿಯೂ ನಿಷೇಧ ಮಾಡುವ ಎಲ್ಲಾ ಸಾಧ್ಯತೆಗಳು ಇದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲೇ ಯುರೋಪ್ ದೇಶಗಳನ್ನು ಉಲ್ಲೇಖ ಮಾಡಿದ್ದಾರೆ. ಯುರೋಪ್ ರಾಷ್ಟ್ರಗಳಲ್ಲೂ ಈ ಬಗ್ಗೆ ಚರ್ಚೆ ಆಗುತ್ತಿದೆ. ಇದು ದೊಡ್ಡ ವಿಚಾರವಾಗಿದೆ. ನಮ್ಮ ಭಾರತದಲ್ಲಿ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳದಲ್ಲಿಯೂ ಹಿಜಾಬ್ ಅನ್ನು ನಿಷೇಧ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಭಾರತದಲ್ಲಿ ನಾವು ಹಿಂದೂ ರಾಷ್ಟ್ರ ಕಲ್ಪನೆಗೆ ಮುಂದಾದವರು. ಫ್ರಾನ್ಸ್‌ಗಿಂತಲೂ ಮೊದಲು ನಾವು ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಿದ್ದೇವೆ. ಫ್ರಾನ್ಸ್‌ಗಿಂತಲೂ ಮೊದಲು ದೇಶದಲ್ಲಿ ಹಿಜಾಬ್ ಅನ್ನು ನಿಷೇಧ ಮಾಡಲಾಗುತ್ತದೆ. ಈ ಮೂಲಕ ವಿಶ್ವಕ್ಕೆ ಒಂದು ಉತ್ತಮ ಸಂದೇಶವನ್ನು ನೀಡಿದಂತೆ ಆಗಲಿದೆ ಎಂದು ಯಶ್ಪಾಲ್ ಸುವರ್ಣ ಹೇಳಿದ್ದಾರೆ.
ಇನ್ನು ಈ ಹಿಜಾಬ್ ವಿದ್ಯಾರ್ಥಿನಿಯರ ಹಿಂದೆ ಯಾರಾದರೂ ಇದ್ದಾರೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಆರು ಜನ ವಿದ್ಯಾರ್ಥಿನಿಯರು ಬರೀ ವಿದ್ಯಾರ್ಥಿನಿಯರು ಅಲ್ಲ.ಅವರಿಗೆ ಬೇರೆ ನಂಟು ಇದೆ ಎಂದು ನಾನು ಈ ಹಿಂದೆಯೇ ತಿಳಿಸಿದ್ದೇನೆ ಎಂದು ಪ್ರಸ್ತಾಪ ಮಾಡಿದ್ದಾರೆ.